ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಸೆ.23ರಂದು ಬೆಳಗ್ಗೆ 10.30ರ ವೇಳೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ ರಾಮಣ್ಣ ಗೌಡ (58ವ) ಎಂಬವರ ಮೇಲೆ ಮರ ಬಿದ್ದಿದ್ದು, ತೀವ್ರ ಗಾಯಗೊಂಡಿದ್ದರು.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜವಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!