ಕಾರು ಢಿಕ್ಕಿ; ಯುಕೆಜಿ ವಿದ್ಯಾರ್ಥಿ ಮೃತ್ಯು

ಕಾರು ಢಿಕ್ಕಿ; ಯುಕೆಜಿ ವಿದ್ಯಾರ್ಥಿ ಮೃತ್ಯು

ಕಾರು ಢಿಕ್ಕಿಯಾಗಿ ಪುತ್ತೂರು ತಾಲೂಕಿನ ಕೆಯ್ಯೂರಿನ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್(5) ಮೃತಪಟ್ಟ ಬಾಲಕ.

ಮಹಮ್ಮದ್ ಆದಿಲ್ ಶನಿವಾರ ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಬಾಲಕ ರಾತ್ರಿ ಮೃತಪಟ್ಟಿದ್ದಾನೆ ತಿಳಿಸಿದ್ದಾರೆ.

Leave a Reply

You May Have Missed

error: Content is protected !!