ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

ಅಕ್ರಮವಾಗಿ ರಾಶಿ ರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!