ಕೆಎಸ್ ಆರ್ ಟಿ ಸಿ ಬಸ್ ನಿಂದ ಎಸೆಯಲ್ಪಟ್ಟು ವ್ಯಕ್ತಿ ಸಾವು

ಕೆಎಸ್ ಆರ್ ಟಿ ಸಿ ಬಸ್ ನಿಂದ ಎಸೆಯಲ್ಪಟ್ಟು ವ್ಯಕ್ತಿ ಸಾವು

ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಧ್ಯೆ ಕಡಬ ಅಂಚೆ ಕಚೇರಿ ಬಳಿ ಚಲಿಸುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ನಿಂದ ವ್ಯಕ್ತಿಯೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.

ಮೃತ ದುರ್ದೈವಿ ಕಡಬ ಸಮೀಪದ ಕಳಾರ ಕುದ್ಕೊಳಿ ನಿವಾಸಿ ಅಚ್ಚುತ ಗೌಡ (63) ಎಂದು ಗುರುತಿಸಲಾಗಿದೆ.

ಕಡಬದಿಂದ ಬಸ್ಸಿನಲ್ಲಿ ಮನೆಯ ಕಡೆ ಹೊರಟಿದ್ದರು. ತಿರುವಿನಲ್ಲಿ ಆಯತಪ್ಪಿ ಕೆಳಕ್ಕೆ ಎಸೆಯಲ್ಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಬಲ್ಯದ ಚಂದ್ರಶೇಖರ ಎಂಬವರೂ ಕೆಳಕ್ಕೆ ಬಿದ್ದಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದರೆ ತೀವ್ರ ಗಾಯಗೊಂಡ ಅಚ್ಚುತ ಗೌಡ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತರು ಮೂಲತ ಪೆರಾಬೆ ಗ್ರಾಮದ ಬೀರಂತಡ್ಕ ನಿವಾಸಿ. ಇವರು ಕಳಾರದಲ್ಲಿ ಭೂಮಿ ಖರೀದಿಸಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!