ಕಡಬ: ಮಸೀದಿಯ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಆರೋಪ: ಪ್ರಕರಣ ದಾಖಲು

ಕಡಬ: ಮಸೀದಿಯ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಆರೋಪ: ಪ್ರಕರಣ ದಾಖಲು

ಬೈಕ್ ನಲ್ಲಿ ರಾತ್ರಿ ವೇಳೆ ಆಗಮಿಸಿ ಮಸೀದಿಯ ಆವರಣದೊಳಗೆ ಒಳಗೆ ನುಗ್ಗಿ ಕಿಡಿಗೇಡಿಗಳಿಬ್ಬರು ಜೈಶ್ರೀರಾಂ ಘೋಷಣೆ ಕೂಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ಠಾಣಾ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಕಾಂಪೌಂಡ್ ಒಳಗೆ ರವಿವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮಸೀದಿಯ ವರಾಂಡದಲ್ಲಿ ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಂ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ಕಂಡು ತಕ್ಷಣವೇ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿ‌ನಲ್ಲಿ ತಿಳಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಡಬ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳು ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Previous post

ಕೊಕ್ಕಡ ಸ.ಹಿ.ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Next post

ಕಡಬ ಮಸೀದಿಯ ಆವರಣದೊಳಗೆ ಜೈಶ್ರೀರಾಂ ಘೋಷಣೆ ಕೂಗಿದ ಆರೋಪಿಗಳ ಪೈಕಿ ಓರ್ವನನ್ನು ಘಟನೆ ನಡೆದ 24 ಗಂಟೆಗಳ ಒಳಗಾಗಿ ಬಂಧಿಸಿದ ಕಡಬ ಪೊಲೀಸರು

Leave a Reply

You May Have Missed

error: Content is protected !!