ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ರೈತ..!!

ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ರೈತ..!!

ಸಾಮಾಜಿಕ ಜಾಲತಾಣದಲ್ಲಿ ದಿನಾಲೂ ಒಂದಕ್ಕಿಂತ ಒಂದು ವಿಶೇಷವಾದ ವಿಡಿಯೋಗಳು ಹರಿದಾಡುತ್ತಿರುತ್ತವೆ ಕೆಲವೊಂದು ಮನಸ್ಸಿಗೆ ಕಿರಿ ಕಿರಿ ನೀಡಿದರೆ ಇನ್ನೂ ಕೆಲವು ನಮ್ಮ ಜೀವನಕ್ಕೆ ಪ್ರೇರಣೆ ನೀಡುವಂತ್ತಿರುತ್ತದೆ. ಅದೇ ರೀತಿ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ನೆಟ್ಟಿಗರಿಂದ ಭಾರಿ ಪ್ರಶಂಸೆ ಕೂಡಾ ವ್ಯಕ್ತವಾಗಿದೆ.

ಕೇರಳ ಮೂಲದ ರೈತರೊಬ್ಬರು ಆಡಿ ಎ4 ಐಷಾರಾಮಿ ಸೆಡಾನ್ ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ಸದಾ ಕ್ರಿಯಾಶೀಲರಾಗಿರುವ ಸುಜಿತ್ ವೆರೈಟಿ ಫಾರ್ಮರ್ ಎಂಬ ಇನ್‌ಸ್ಟಾಗ್ರಾಮ್ ಚಾನೆಲ್ ಮೂಲಕ ಪ್ರಸಿದ್ದಿ ಪಡೆದಿದ್ದಾನೆ. ಈ ವ್ಯಕ್ತಿ ತನ್ನದೇ ತೋಟದಲ್ಲಿ ಬೆಳೆದ ತರಕಾರಿಗಳನ್ನು ಕಟಾವು ಮಾಡಿ ತಂದು ನಗರದ ಪ್ರಮುಖ ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Leave a Reply

You May Have Missed

error: Content is protected !!