ಕಡಬ ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ಸೈಂಟ್ ಜೋಕಿಮ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ಸೈಂಟ್ ಜೋಕಿಮ್ ಪ್ರೌಢ ಮತ್ತು ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸುವ ಮೂಲಕ ಮಹತ್ವದ ಕುರಿತು ಮಕ್ಕಳಿಗೆ ತಿಳಿಸಿದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನೆರವೇರಿಸಿ ಕೊಟ್ಟರು ಹಾಗೂ ಶಾಲೆಯ ಸುತ್ತಮುತ್ತ ಸ್ವಚ್ಛತೆಯನ್ನು ಮಾಡಿದರು.

ಸೈಂಟ್ ಜೋಕಿಮ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಹಾಗೂ ಸೈಂಟ್ ಜೋಕಿಮ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಲತಾ ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದ ಹಾಗೂ ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತರಿದ್ದರು.

ಫಾತಿಮಾತ್ ಸನಾ ನಿರೂಪಿಸಿ, ರಕ್ಷಾ ಹರೀಶ್ ಗೌಡ ಸ್ವಾಗತಿಸಿ, ಸುಹೈಮ ವಂದಿಸಿದರು

Leave a Reply

You May Have Missed

error: Content is protected !!