ನೆಲ್ಯಾಡಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ನೆಲ್ಯಾಡಿ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.3ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಮರಂಕೋಡಿ ಬೆಂಬಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಚನಮು (58) ಎಂದು ಗುರುತಿಸಲಾಗಿದ್ದು, ಈತ ಕೂಲಿ ಕೆಲಸ ಮಾಡಿಕೊಂಡಿದ್ದು , ಕಳೆದ ಮೂರು ವರ್ಷಗಳಿಂದ ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು ಎಷ್ಟೇ ಔಷಧಿ ಮಾಡಿದರು ಗುಣಮುಖರಾಗದೆ ಇದ್ದರು.ವಿಚಾರದಿಂದ ಮಾನಸಿಕವಾಗಿ ಆತ ನೊಂದಿದ್ದರು ಎನ್ನಲಾಗಿದೆ.

ಮಂಗಳವಾರ ಬೆಳಗ್ಗೆ ತಮ್ಮ ಮನೆಯಲ್ಲಿಯೇ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣವು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದೆ.

Leave a Reply

You May Have Missed

error: Content is protected !!