ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ಆತ್ಮಹತ್ಯೆ

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿ ಆತ್ಮಹತ್ಯೆ

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉದ್ಯೋಗಿಯೊಬ್ಬರು ಸೋಮವಾರ ಮಧ್ಯಾಹ್ನ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಮೂಲತಃ ಬಾಗಲಕೋಟೆ ನಿವಾಸಿಯಾಗಿರುವ ಹನುಮಂತ (24) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಯಾಗಿದ್ದ ಇವರು ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!