ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 5 ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 5 ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸರಕಾರಿ ಪ್ರೌಢಶಾಲೆ ಕಡಬ ಇದರ ಆಶ್ರಯದಲ್ಲಿ ನಡೆದ ಕಡಬ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ದೀಕ್ಷಿತಾ ಪ್ರಥಮ ಸ್ಥಾನ, 14ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಧೃತಿ ಪ್ರಥಮ ಸ್ಥಾನ, 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಭಾಗ್ಯಶ್ರೀ ಯು.ಆರ್. ದ್ವಿತೀಯ ಸ್ಥಾನ, ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಎತ್ತರ ಜಿಗಿತದಲ್ಲಿ ಮುಬೀನ್ ದ್ವಿತೀಯ ಸ್ಥಾನ ಮತ್ತು ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಉದ್ದ ಜಿಗಿತದಲ್ಲಿ ಪ್ರಜ್ಯೋತ್ ಎನ್.ಕೆ. ದ್ವಿತೀಯ ಸ್ಥಾನಗಳನ್ನು ಗಳಿಸಿರುತ್ತಾರೆ.

ಈ 5 ವಿದ್ಯಾರ್ಥಿಗಳು ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

Previous post

ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದ ಕಳೆಂಜದ ವಿವಾದಿತ ಜಾಗ‌ದಲ್ಲಿ ಇಂದಿನಿಂದ (ಅ.11) ಸರ್ವೆ ಕಾರ್ಯ ಆರಂಭ

Next post

ಗೋಳಿತಟ್ಟು ಸ.ಉ.ಹಿ.ಪ್ರಾ ಶಾಲೆಯ ವಿದ್ಯಾರ್ಥಿನಿ ಆಯಿಷತ್ ತಸ್ರೀಫಾಳಿಗೆ ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎರಡು ಚಿನ್ನ

Leave a Reply

You May Have Missed

error: Content is protected !!