ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

ದಿನೇ ದಿನೇ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

ಯುವತಿ ಕವನ(20) ಮೃತ ದುರ್ದೈವಿ, ಮಂಜುನಾಥ್(47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್‌ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.

ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

Leave a Reply

You May Have Missed

error: Content is protected !!