ಕಾರು ಢಿಕ್ಕಿ; ಪಾದಚಾರಿ ಯುವತಿ ಮೃತ್ಯು

ಕಾರು ಢಿಕ್ಕಿ; ಪಾದಚಾರಿ ಯುವತಿ ಮೃತ್ಯು

ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ(23) ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಬಿಟ್ಟು ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.

ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!