ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ತಪ್ಪಿಸಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ ಸಾವು

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ತಪ್ಪಿಸಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ ಸಾವು

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ಅರ್ಕಾವತಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ ಕನಕಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜೂಜು ಅಡ್ಡೆ ಮೇಲೆ ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಮರಿಸ್ವಾಮಿ ನದಿಗೆ ಹಾರಿದ್ದ. ನದಿಯಲ್ಲಿ ಈಜಿ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ಮರಳಿ ಬಂದಿದ್ದರು. ಆದರೆ ಮೂರು ದಿನಗಳ ಬಳಿಕ ಮರಿಸ್ವಾಮಿ ಶವ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದೆ.

ಮೃತ ಮರಿಸ್ವಾಮಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post

ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಯಡವಟ್ಟು; ಮಗು ಅದಲು ಬದಲು, ಹೆತ್ತವರು ಕಂಗಾಗಲು

Next post

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜ್‍ನ ಎನ್.ಸಿ.ಸಿ. ಅಧಿಕಾರಿ ಲೆಫ್ಟಿನೆಂಟ್ ಜೊನ್ಸನ್ ಡೇವಿಡ್ ಸಿಕ್ವೇರ ಎನ್.ಸಿ.ಸಿ ಕ್ಯಾಪ್ಟನ್ ಪದವಿಗೆ ಭಡ್ತಿ

Leave a Reply

You May Have Missed

error: Content is protected !!