ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಜೀವ ಜಗತ್ತಿನ ವಿಸ್ಮಯಗಳು’ ಎನ್ನುವ ವಿಶೇಷ ಕಾರ್ಯಕ್ರಮ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆನ್ನೆಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಜೀವ ಜಗತ್ತಿನ ವಿಸ್ಮಯಗಳು’ ಎನ್ನುವ ವಿಶೇಷ ಕಾರ್ಯಕ್ರಮ

ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಭಟ್ ಅವರ ಅಧ್ಯಕ್ಷತೆಯಲ್ಲಿ ‘ಜೀವ ಜಗತ್ತಿನ ವಿಸ್ಮಯಗಳು’ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಸುನಿಲ್ ಪಿ.ಜೆ ಅವರು ಜೀವ ಜಗತ್ತಿನ ಹಲವು ವಿಸ್ಮಯಗಳ ಬಗ್ಗೆ ದೃಶ್ಯಾವಳಿ ಮೂಲಕ ಮಾಹಿತಿ ನೀಡಿದರು.

ಸ್ಥಳೀಯ ಪಂಚಾಯತ್ ಇದರ ಗ್ರಂಥಪಾಲಕಿ ಸುಧಾ ಭರತ್, ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

ಸ್ವಯಂ ಸೇವಕ ಯಶ್ವಿತ್ ಸ್ವಾಗತಿಸಿ, ಧನುಷ್ ವಂದಿಸಿದರು, ಪ್ರಾಪ್ತಿ ನಿರೂಪಿಸಿದರು.

Leave a Reply

You May Have Missed

error: Content is protected !!