ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

ಕತ್ತು ಸೀಳಿ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಪತಿ, ಎರಡು ಮಕ್ಕಳು ಅನಾಥ

ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ನಂದಿನಿ(30) ಕೊಲೆಯಾದ ಮಹಿಳೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ಓರ್ವ ಪುತ್ರ ಹಾಗೂ ಮಗಳೊಂದಿಗೆ ಕಳೆದ 3 ದಿನಗಳಿಂದ ಸಬ್ಬತ್ತಿ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು.ಇಬ್ಬರ ನಡುವೆ ಗಲಾಟೆ ನಡೆದಿದ್ದು, ಜಗಳದಲ್ಲಿ ಲೋಕೇಶ ನಾಯ್ಕ ಮಾರಕಾಸ್ತ್ರದಿಂದ ಪತ್ನಿಯ ಕುತ್ತಿಗೆ ಹೊಡೆದಿದ್ದಾನೆ. ಪರಿಣಾಮ ನಂದಿನಿ ರಕ್ತದ ಮಡುವಿನಲ್ಲೇ ಮನೆಯಿಂದ ಹೊರಗೆ ಓಡಿಬಂದು ನೆಲಕ್ಕೆ ಬಿದ್ದು ಪ್ರಾಣಬಿಟ್ಟಿದ್ದಾಳೆ.

ರಕ್ತದ ಮಡುವಿನಲ್ಲಿ ಬಿದ್ದ ಮಹಿಳೆಯನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ದೌಡಾಯಿಸಿ ಪರಿಶೀಲನೆ ನಡೆಸಿ. ಬಳಿಕ ಆರೋಪಿ ಪತಿ ಲೋಕೇಶ ನಾಯ್ಕ‌ನನ್ನು ಖಾಸಗಿ ಹೋಟೆಲೊಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕೇಶ ನಾಯ್ಕ ಶಿಲ್ಪಿ ಕೆಲಸ ಮಾಡುತ್ತಿದ್ದರೆ, ನಂದಿನಿ ಮನೆಯಲ್ಲಿರುತ್ತಿದ್ದರು. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದರಿಂದ ಎರಡು ಮಕ್ಕಳು ಇದೀಗ ಅನಾಥವಾಗಿವೆ.

Leave a Reply

You May Have Missed

error: Content is protected !!