ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನ ಡಿಕ್ಕಿ; ಬಾಲಕ ಸಾವು

ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನ ಡಿಕ್ಕಿ; ಬಾಲಕ ಸಾವು

ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಅ.18ರಂದು ಲಾಯಿಲದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್(10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಇಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬಂದ ಪಿಕಪ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ.

ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!