ಡಿವೈಡರ್‌ಗೆ ತಾಗಿ ಬಸ್‌ ಪಲ್ಟಿ: 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಡಿವೈಡರ್‌ಗೆ ತಾಗಿ ಬಸ್‌ ಪಲ್ಟಿ: 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್‌ ಡಿವೈಡರ್‌ಗೆ ತಾಗಿ ಪಲ್ಟಿಯಾಗಿದ್ದು, ಪರಿಣಾಮ ಬಸ್‌ನಲ್ಲಿದ್ದ 10ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಎನ್ನುವಲ್ಲಿ ಬುಧವಾರ ಸಂಜೆ 7.30ರ ಸುಮಾರಿಗೆ ಸಂಭವಿಸಿದೆ.

ಕುಂದಾಪುರದಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಬಸ್‌ ಚಾಲಕನ ವೇಗದ ಹಾಗೂ ನಿರ್ಲಕ್ಷ್ಯತನದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದವರೆಲ್ಲರೂ ತ್ರಾಸಿ, ಉಪ್ಪುಂದ, ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದರು.

ಗಂಗೊಳ್ಳಿ ಎಸ್‌ಐ ಹರೀಶ್‌ ಆರ್‌ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಹಾಗೂ ಹೆದ್ದಾರಿಯ ವಾಹನ ದಟ್ಟಣೆ ನಿವಾರಿಸುವಲ್ಲಿ ನೆರವಾದರು. ಗಂಗೊಳ್ಳಿಯ 24*7 ಆ್ಯಂಬುಲೆನ್ಸ್‌ನ ಇಬ್ರಾಹಿಂ ಗಂಗೊಳ್ಳಿ ಹಾಗೂ ಸ್ಥಳೀಯರು ಗಾಯಾಳುಗಳನ್ನು ಕುಂದಾಪುರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

Leave a Reply

You May Have Missed

error: Content is protected !!