ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?

ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ.

ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಕೇಂದ್ರ ಗೃಹ ಸಚಿವಾಲಯ ಈ ಭದ್ರತೆ ಒದಗಿಸಿದೆ ಎನ್ನಲಾಗಿದೆ. ಗೃಹ ಸಚಿವಾಲಯ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರ ಉನ್ನತ ಶ್ರೇಣಿಯ ಭದ್ರತೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಹಗಲು-ರಾತ್ರಿ ದಿನದ 24 ಗಂಟೆ ಕಾಯುತ್ತಿರುತ್ತಾರೆ. ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುವುದು. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು ಇಬ್ಬರು ವೀಕ್ಷಕರನ್ನು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುತ್ತದೆ.

Leave a Reply

You May Have Missed

error: Content is protected !!