ಹುಲಿ ಉಗುರು ಕೇಸ್ನಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ ಸಿಕ್ತು ಜಾಮೀನು

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಈಗ ಜಾಮೀನು ಸಿಕ್ಕಿದೆ.
ಇಷ್ಟು ದಿನಗಳ ಕಾಲ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದರು. ಸದ್ಯಕ್ಕೆ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.
4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ. ಇಂದು (ಅಕ್ಟೋಬರ್ 27) ಸಂಜೆ ವೇಳೆಗೆ ವರ್ತೂರು ಸಂತೋಷ್ ಬಿಡುಗಡೆ ಆಗಲಿದ್ದಾರೆ. ಮತ್ತೆ ಅವರು ಬಿಗ್ ಬಾಸ್ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕೌತುಕ ಮೂಡಿದೆ.
















Leave a Reply