ಸಿ.ಎಂ. ಸಿದ್ದರಾಮಯ್ಯ ಕುರಿತು ಅವಹೇಳನಕಾರಿ ಫೇಸ್ಬುಕ್ ಬರಹ: ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಸಿ.ಎಂ. ಸಿದ್ದರಾಮಯ್ಯ ಕುರಿತು ಅವಹೇಳನಕಾರಿ ಫೇಸ್ಬುಕ್ ಬರಹ: ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

“ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ” ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊವನ್ನು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರಾದ ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಶೇಖರ್ ಕುಕ್ಕೇಡಿ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

You May Have Missed

error: Content is protected !!