ಬೈಕ್ ಢಿಕ್ಕಿ; ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿ ಮೃತ್ಯು

ಬೈಕ್ ಢಿಕ್ಕಿ; ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿ ಮೃತ್ಯು

ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಎಂದು ಗುರುತಿಸಲಾಗಿದೆ.

ಸಂಜೆ ಶಾಲೆ ಬಿಟ್ಟು ಮನೆಗೆ ಹೋಗುವ ವೇಳೆ ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದಿತ್ತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.

Leave a Reply

You May Have Missed

error: Content is protected !!