ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್‌ ಶೆಟ್ಟಿ(24) ಮೃತ ಯುವಕ.

ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾನೆ.

ಪ್ರಮೋದ್‌ ಬಡಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಸೌಮ್ಯ ಸ್ವಭಾವದನಾಗಿದ್ದ ಈತ ವಾಲಿಬಾಲ್‌ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರನ್ನು ಅಗಲಿದ್ದಾನೆ. ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

Leave a Reply

You May Have Missed

error: Content is protected !!