ನೆಲ್ಯಾಡಿ: ಬೈಕ್, ಇಕೊಮೆಟ್ ಡಿಕ್ಕಿ-ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಬೈಕ್, ಇಕೊಮೆಟ್ ಡಿಕ್ಕಿ-ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ಬೈಕ್ ಹಾಗೂ ಇಕೊಮೆಟ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನ.1ರಂದು ರಾತ್ರಿ ನಡೆದಿದೆ.

ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮೆಹತೋ(35ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಇವರು ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದರು. ಇವರು ನ.1ರಂದು ಸಂಜೆ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಡಿಕ್ಕಿ ಸಂಭವಿಸಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಮೃತಪಟ್ಟರು ಎಂದು ವರದಿಯಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Leave a Reply

You May Have Missed

error: Content is protected !!