ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್; ಸವಾರರ ಮೇಲೆ ಹರಿದ ಲಾರಿ

photos

ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್; ಸವಾರರ ಮೇಲೆ ಹರಿದ ಲಾರಿ

ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ(43) ಎಂಬ ದುರ್ದೈವಿ ಛಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!