ಕಲ್ಲೇಗ ಅಕ್ಷಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ

ಕಲ್ಲೇಗ ಅಕ್ಷಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ

ಪುತ್ತೂರು ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.

ಕೇಶವ ಪಡೀಲ್ ಅವರು ಕೊಲೆ ಪ್ರಕರಣದ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ.

Leave a Reply

You May Have Missed

error: Content is protected !!