ಶೌಚಾಲಯದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರು ಶಿಕ್ಷಕರ ಬಂಧನ!

ಶೌಚಾಲಯದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರು ಶಿಕ್ಷಕರ ಬಂಧನ!

ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸರ್ಕಾರಿ ಶಾಲೆಯ ಶೌಚಾಲಯದಲ್ಲಿ 6ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಇಬ್ಬರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ನವೆಂಬರ್ 9ರಂದು ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಕೆಯ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಆಘಾತಕಾರಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಶೌಚಾಲಯಕ್ಕೆ ತೆರಳಿದ್ದ ವೇಳೆ ಅಲ್ಲಿಗೆ ಬಂದ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ’ ಎಂದು ಬಾಲಕಿ ಹೇಳಿದ್ದಾಳೆ. ಈ ಬಗ್ಗೆ ಪೊಲೀಸರು ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್‍ಗಳಡಿ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು ನಬರಂಗಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಬಂಧಿಸಿರುವ ಆರೋಪಿ ಶಿಕ್ಷಕರನ್ನು ಜೈಲಿಗೆ ಅಟ್ಟಿರುವ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!