ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ; ಮುಖ್ಯಮಂತ್ರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನವಿ

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ; ಮುಖ್ಯಮಂತ್ರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನವಿ

ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಅವರು ಪತ್ರದ ಮುಖೇನ ಮನವಿ ಸಲ್ಲಿಸಿದರು.

ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

Leave a Reply

You May Have Missed

error: Content is protected !!