ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 4 ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ರಿಧಿ ಶೆಟ್ಟಿ(10ನೇ ತರಗತಿ) ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ ಪ್ರಾಪ್ತಿ ಎನ್.ಕೆ.(10ನೇ ತರಗತಿ) ದ್ವಿತೀಯ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಡೆಲ್ನಾ ಬಿನೋಯ್ (7ನೇ ತರಗತಿ) ಪ್ರಥಮ ಸ್ಥಾನ, ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಸ್ನೇಹ ಕೆ.ಸಿ.(5ನೇ ತರಗತಿ) ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಶಾಲಾ ಆಡಳಿತ ಮಂಡಳಿ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.

Leave a Reply

You May Have Missed

error: Content is protected !!