ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಮಹಿಳೆಗೆ ಹೃದಯಾಘಾತ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಮಹಿಳೆಗೆ ಹೃದಯಾಘಾತ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು ಹೃದಯಾಘಾತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಎಂ.ವಿ. ಗಾರ್ಡನ್ ನಿವಾಸಿ ಶಿವಕುಮಾರ್ ಎಂಬುವರ ಪತ್ನಿ ಲಕ್ಷ್ಮೀ (32) ಮೃತಪಟ್ಟವರು. ಶಿವಕುಮಾರ್ ಅವರು ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮ ತೆರಳಿದ್ದರು. ಲಕ್ಷ್ಮೀ ಅವರು ಸಂಬಂಧಿಕರ ಜತೆ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಬಂದಿದ್ದರು.

ಸೋಮವಾರ ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!