ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ.

ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.

Leave a Reply

You May Have Missed

error: Content is protected !!