ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ

ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ

ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆಯಲ್ಲಿ ಸಂಭವಿಸಿದೆ.

ಫಾತಿಮಾ ರುಕಿಯಾ(23) ಆತ್ಮಹತ್ಯೆ ಮಾಡಿಕೊಂಡವರು.

ಫಾತಿಮಾ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಕಳೆದ ಜು.7ರಂದು ಹೆರಿಗೆಯಾಗಿದ್ದು ಅವರಿಗೆ ಅಬ್ದುಲ್ಲಾ ಹೂದ್‌ ಹೆಸರಿನ ನಾಲ್ಕುವರೆ ತಿಂಗಳ ಮಗುವಿತ್ತು. ಹೆರಿಗೆಯ ಅನಂತರ ಫಾತಿಮಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ತನ್ನ ತಂದೆಯಲ್ಲಿ ಹೇಳುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳುತ್ತಿದ್ದರು. ಹಾಗಾಗಿ ಅವರಿಗೆ ಮಾನಸಿಕ ವೈದ್ಯೆಯ ಮೂಲಕ ಚಿಕಿತ್ಸೆ ಕೊಡಿಸಲಾಗಿತ್ತು.

ಶನಿವಾರ ಬೆಳಗ್ಗೆ 11ರಿಂದ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ಅವರು ತಾವು ವಾಸವಾಗಿದ್ದ ಗುಜ್ಜರಕೆರೆಯ ಅಪಾರ್ಟ್‌ಮೆಂಟ್‌ನ ಬೆಡ್‌ರೂಮ್‌ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್‌ ಟಬ್‌ನಲ್ಲಿ ನೀರು ತುಂಬಿಸಿ ಮಗುವನ್ನು ಅದರಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ತಾನು ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯ ತುದಿಯನ್ನು ಕಟ್ಟಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous post

ರಾಮ ಮಂದಿರ ಲೋಕಾರ್ಪಣೆ – ಗಣ್ಯರ ಜೊತೆ ಸಾಮಾನ್ಯ ಜನರಿಗೆ ಆಹ್ವಾನ – ಆಹ್ವಾನ ಪತ್ರಿಕೆಯಲ್ಲಿ ಏನಿದೆ?

Next post

ಡಾಕ್ಟರ್‌ ಆಗಬೇಕೆಂದು ಕನಸು ಕಂಡಿದ್ದ ಹುಡುಗಿ ರಕ್ತದ ಕ್ಯಾನ್ಸರ್‌ಗೆ ಬಲಿ – ಮಗಳ ಆಸೆಯಂತೆ ದೇಹದಾನ ಮಾಡಿದ ಪೋಷಕರು

Leave a Reply

You May Have Missed

error: Content is protected !!