ಕೊಣಾಜೆ ಆನೆ ದಾಳಿ ಶಂಕೆ; ದನ ಸಾವು

ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ದನವೊಂದು ರಾತ್ರಿ ವೇಳೆ ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ.
ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳು ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ವಷ್ಟ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

















Leave a Reply