ವ್ಯವಹಾರದಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ

ವ್ಯವಹಾರದಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ

ಕೃಷಿ ತೋಟ ವ್ಯವಹಾರದಲ್ಲಿ ನಷ್ಟ ಹಾಗೂ ಸಾಲದ ಹೊರೆಯಿಂದ ಬಳಲುತ್ತಿದ್ದ ವಿವಾಹಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕಲ್ಮಂಜ ಗ್ರಾಮದ ಆದರ್ಶ ನಗರ ನಿಡಿಗಲ್ಲು ಮನೆ ನಿವಾಸಿ ರಾಧೀಶ್(32) ಎಂಬಾತ ಮಲವಂತಿಗೆ ಅಂತರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಡಿ.4ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಮೃತನ ಪತ್ನಿ ರಂಜಿನಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಮದ್ಯಪಾನ ಚಟವನ್ನು ಹೊಂದಿದ್ದ ಆತ ಈ ಹಿಂದೆ ಜೂ.7ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಲೆಗೆ ಗಾಯವಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಬಳಿಕ ವಿಶ್ರಾಂತಿಯಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Leave a Reply

You May Have Missed

error: Content is protected !!