ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಬಿ.ಟಿ.ರಂಜನ್ ವಿಧಿವಶ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಬಿ.ಟಿ.ರಂಜನ್ ವಿಧಿವಶ

ನೇಸರ ಫೆ05:ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ , ಹಿರಿಯ ಪತ್ರಕರ್ತ, ಹೊಸದಿಂಗತ ಪತ್ರಿಕೆಯ ವರದಿಗಾರ ಬಿ.ಟಿ‌. ರಂಜನ್ ಎಂದೇ ಖ್ಯಾತರಾಗಿದ್ದ ಉಪ್ಪಿನಂಗಡಿ ರಥಬೀದಿ ನಿವಾಸಿ ಬಂಟ್ವಾಳ ತೋನ್ಸೆ ಶೆಣೈ (60) ಫೆ. 5 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಜ್ವರವು ಕಾಣಿಸಿಕೊಂಡು ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಡು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ‌ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ರಂಜನ್ ಅವರು ಪತ್ನಿ ಗೀತಾ ಶೆಣೈ ಮತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.ರಂಜನ್ ರವರು ಮೂರು ದಶಕಕ್ಕೂ ಅಧಿಕ ಕಾಲದಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದರು.

ಆಮಂತ್ರಣ

ಜಾಹೀರಾತು

Leave a Reply

You May Have Missed

error: Content is protected !!