ನೆಲ್ಯಾಡಿ: ಖಾಸಗಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ – ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ

ನೆಲ್ಯಾಡಿ: ಖಾಸಗಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ – ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ

ಖಾಸಗಿ ಸಂಸ್ಥೆಯ ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಗಾಯಾಳುವನ್ನು ಪಡುಬೆಟ್ಟು ನಿವಾಸಿ ಮಹಮ್ಮದ್ ಸಾಬಿತ್(23) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!