ಓವರ್ ಟೆಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು

ಓವರ್ ಟೆಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು

ಕಾರನ್ನು ಓವರ್ ಟೆಕ್ ಮಾಡುವ ಭರದಲ್ಲಿದ್ದ ಇನ್ನೊಂದು ಕಾರು ಎದುರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ನಡೆದಿರುವ ಘಟನೆಯಾಗಿದ್ದು ಅಪಘಾತದಲ್ಲಿ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಕಾರು ಚಾಲಕ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿಒಂದು ಕಾರು ನಿಧಾನವಾಗಿ ಚಲಿಸುತ್ತಿದ್ದು ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಎದುರಿನ ಕಾರನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ಬಲಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಡಿವೈಡರ್ ಗೆ ಬಡಿದು ರಸ್ತೆ ಮೇಲೆ ಬೀಳುವುದು ಕಾಣಬಹುದು, ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಸ್ಕೂಟಿ ಸಂಪೂರ್ಣ ಪುಡಿ ಪುಡಿಯಾಗಿದೆ.

ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous post

ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ

Next post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೋಳಿತೊಟ್ಟು ವಲಯ: ರಾಮಕುಂಜದಲ್ಲಿ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ

Leave a Reply

You May Have Missed

error: Content is protected !!