ಶಾಲಾ ಬಸ್ – ಬೈಕ್ ನಡುವೆ ಅಪಘಾತ; ಇಬ್ಬರಿಗೆ ಗಾಯ

ಶಾಲಾ ಬಸ್ – ಬೈಕ್ ನಡುವೆ ಅಪಘಾತ; ಇಬ್ಬರಿಗೆ ಗಾಯ

ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ಸಮೀಪ ಹಿಂದಿನಿಂದ ಬಂದ ಬೈಕ್ ಬಸ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

You May Have Missed

error: Content is protected !!