ಅಯೋಧ್ಯೆಯ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ- ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ಅಯೋಧ್ಯೆಯ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ- ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

ನೆಲ್ಯಾಡಿ: ಅಯೋಧ್ಯೆಯ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.22ರಂದು ಬೆಳಗ್ಗೆ ಗಂ.9.30ರಿಂದ ಸಾಮೂಹಿಕ ತಾರಕ ಮಂತ್ರ ಪಠಣ, ವಿವಿಧ ಭಜನಾ ಸಂಘದ ಸದಸ್ಯರಿಂದ ಭಜನಾ ಸಂಕೀರ್ತನೆ. ಬೆಳಗ್ಗೆ ಗಂ.11.30ರಿಂದ ಪವಮಾನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಭಟ್ ದುರ್ಗಾಶ್ರೀ, ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಪ್ರಸಾದ್ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

Leave a Reply

You May Have Missed

error: Content is protected !!