ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯರಗನಹಳ್ಳಿ ದಂಪತಿ ವಿಶ್ವ(34), ಸುಶ್ಮಾ(28) ಆತ್ಮಹತ್ಯೆ ಮಾಡಿಕೊಂಡವರು. ದಂಪತಿ ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಲತಾಣದಲ್ಲಿ ವಿಡಿಯೋ ಅಪ್​ಲೋಡ್​​​ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಮೈಸೂರಿನ ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಮೃತ ವಿಶ್ವ ಅವರು ತಮಗೆ ಪರಿಚಯಸ್ಥನಾಗಿದ್ದ ಶಿವು ಎಂಬುವವನಿಗೆ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಚೋರನಹಳ್ಳಿ ರಾಜಣ್ಣ ಎಂಬುವವರ ಬಳಿ ತಮ್ಮ ಚಿನ್ನಾಭರಣ ಅಡವಿಟ್ಟು, ಕೆಲವರ ಬಳಿ ಸಾಲಕ್ಕೆ ಹಣ ಪಡೆದು ಶಿವುಗೆ ಸಾಲ ಕೊಡಿಸಿ ಸಹಾಯ ಮಾಡಿದ್ದರು. ಆದರೆ ಶಿವು ಸಾಲ ವಾಪಸ್​ ನೀಡದೆ ತಕರಾರು ಮಾಡಿದ್ದ. ಹಿನ್ನೆಲೆ ಸಾಲಗಾರರ ಕಿರುಕುಳ ಹೆಚ್ಚಾಗಿತ್ತು. ಸಾಲ ತೀರಿಸದೆ ಚೋರನಹಳ್ಳಿ ರಾಜಣ್ಣ ವಿಶ್ವ ಅವರ ಚಿನ್ನಾಭರಣ ಹಿಂದಿರುಗಿಸಲು ನಿರಾಕರಿಸಿದ್ದರು. ಇದರಿಂದ ನೊಂದ ವಿಶ್ವ ಸಾಲ ನೀಡಿದ್ದ ರಾಜಣ್ಣ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!