ಮುಂಡಾಜೆ: ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ: ದೀಪ ಪ್ರದಾನ ಕಾರ್ಯಕ್ರಮ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ ರಾವ್ ಆಗಮಿಸಿ ಸಂಸ್ಕಾರಯುತ ಶಿಕ್ಷಣದಿಂದ ದೇಶದ ಏಳಿಗೆ ಸಾಧ್ಯ, ವಿದ್ಯಾರ್ಥಿಗಳು ಉತ್ತಮ ಆದರ್ಶಗಳನ್ನು ಮೈಗೂಡಿಸುವ ಮೂಲಕ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ.ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಪೂಜಿತ್ ಸ್ವಾಗತಿಸಿ, ಧನುಷ್ ಕೆ.ಎನ್ ಕಾರ್ಯಕ್ರಮವನ್ನು ನಿರೂಪಿಸಿ, ತುಳಸಿ ಧನ್ಯವಾದಗೈದರು.

Leave a Reply

You May Have Missed

error: Content is protected !!