ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಗೇರುಕಟ್ಟೆಯಲ್ಲಿ ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂಬಾತನಾಗಿದ್ದಾನೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಸ್ಕೂಟರ್ ಅನ್ನು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ

ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಆರೋಪಿಗಳ‌ ವಿಚಾರಣೆ ನಡೆಸುತ್ತಿದ್ದು ಗಾಂಜಾ ಸಾಗಾಟ ಜಾಲವನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿದ್ದಾರೆ. ಪೊಲೀಸರು ನಡೆಸಿದ ದೊಡ್ಡ ಮಟ್ಟದ ಗಾಂಜಾ ಬೇಟೆ ಇದಾಗಿದೆ‌.

Leave a Reply

You May Have Missed

error: Content is protected !!