ಸರಣಿ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಸರಣಿ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಜೀಪ್‌, ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ (45) ಮೃತರು. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆಯ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಜೀಪ್ ನಿಯಂತ್ರಣ ತಪ್ಪಿ ಎದುರು ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಚಕ್ರ ಸಿಡಿದು ಹೋಗಿದ್ದು, ಇದರಿಂದ ಕಾರು ಮುಂದೆ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

You May Have Missed

error: Content is protected !!