LPG Cylinder Price 100ರೂ. ಇಳಿಕೆ; ಮಹಿಳಾ ದಿನದಂದು ಶುಭ ಸುದ್ದಿ ನೀಡಿದ ಪ್ರಧಾನಿ

LPG Cylinder Price 100ರೂ. ಇಳಿಕೆ; ಮಹಿಳಾ ದಿನದಂದು ಶುಭ ಸುದ್ದಿ ನೀಡಿದ ಪ್ರಧಾನಿ

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 100 ಇಳಿಕೆ ಮಾಡುವುದಾಗಿ ಘೋಷಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಸುದ್ದಿಯೊಂದನ್ನು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನ, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ, ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಮಹಿಳೆಯರಿಗೆ ಅಡುಗೆ ಅನಿಲ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಕುಟುಂಬದ ಯೋಗಕ್ಷೇಮವನ್ನು ಬೆಂಬಲಿಸುವುದರ ಜೊತೆಗೆ ಆರೋಗ್ಯಕರ ವಾತಾವರಣವನ್ನು ನಿರ್ಮಿಸಲು ಸಂಕಲ್ಪವನ್ನು ಹೊಂದಿದ್ದು ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುವಂತಹ ಯೋಜನೆಗಳನ್ನು ಕಾರ್ಯಗತಗೊಳಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

Previous post

ಉಪ್ಪಿನಂಗಡಿ: ಇಂದು ವಿದ್ಯಾರ್ಥಿಗಳಲ್ಲಿ ಪೋಕ್ಸೊ ಕಾಯಿದೆ ಮಾಹಿತಿ ಮತ್ತು ಮಾದಕ ವಸ್ತುಗಳ ಸೇವನೆಯ ಕುರಿತು ಜಾಗೃತಿ ಅಗತ್ಯ ಇದೆ- ಡಾ.ಗೋವಿಂದಪ್ರಸಾದ್ ಕಜೆ

Next post

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Leave a Reply

You May Have Missed

error: Content is protected !!