ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಸ್ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಾರ್ಮಾಡಿ ಘಾಟಿಯಲ್ಲಿ ಮಂಗಳೂರಿನತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಶುಕ್ರವಾರ ಬೆಳಗ್ಗೆ ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಈ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ. ಯಾವುದೋ ಸಮಸ್ಯೆಯಾಗದೆ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ಸಿನಲ್ಲಿದ್ದ 70 ಮಂದಿ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಅತ್ಯಂತ ಅಪಾಯಕಾರಿ ತಿರುವುಗಳಿಂದ ಕೂಡಿರುವ ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಚಾಲಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ.

Leave a Reply

You May Have Missed

error: Content is protected !!