ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಮಕುಂಜ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ಅವರಿಗೆ ಸನ್ಮಾನ

ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಮಕುಂಜ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ಅವರಿಗೆ ಸನ್ಮಾನ

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ 26 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ಅವರನ್ನು ಸನ್ಮಾನಿಸಲಾಯಿತು.

ರಾಧಾಕೃಷ್ಣ ಕೆ.ಎಸ್.ಅವರ ಸಮರ್ಥ ಆಡಳಿತ ವೈಖರಿಯಿಂದ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಮತ್ತು ಆಡಳಿತ ವಿಭಾಗದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿದ ರಾಧಾಕೃಷ್ಣ ಕೆ.ಎಸ್.ಅವರನ್ನು ಸನ್ಮಾನಿಸಲಾಯಿತು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಸಮ್ಮೇಳನದ ಅಧ್ಯಕ್ಷೆ ಭುವನೇಶ್ವರಿ ಹೆಗಡೆ, ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಸಹಿತ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!