ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ; ಓರ್ವ ಮೃತ್ಯು

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ; ಓರ್ವ ಮೃತ್ಯು

ಬೆಳ್ತಂಗಡಿ: ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.

ಬೆಳ್ತಂಗಡಿಯಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಢಿಕ್ಕಿಯಾಗಿದೆ. ಪರಿಣಾಮ ಚಾಲಕ ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!