ಮಹಿಳಾ ಕಾನ್ಸ್‌ಟೇಬಲ್ ನೇಣಿಗೆ ಶರಣು

ಮಹಿಳಾ ಕಾನ್ಸ್‍ಟೇಬಲ್ ಒಬ್ಬರು ಪೊಲೀಸ್ ಕ್ವಾಟ್ರಸ್‍ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾಪುವಿನಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಜ್ಯೋತಿ (29) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಎಂದು ತಿಳಿದುಬಂದಿದೆ.ಅವರು ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್‍ಪಿ ಡಾ.ಅರುಣ್ ಅವರು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.


















Leave a Reply