ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

ಕೊಕ್ಕಡ ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ ತೊಡ್ತಿಲ್ಲಾಯ ಇವರು ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತೃ ಸಂಸ್ಥೆ ಬೆಳ್ತಂಗಡಿ ಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಮಾತೃ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಬರೆಮೇಲು ಕಡಿರುದ್ಯಾವರ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಲಾಯಿ, ಸಂಘದ ಗ್ರಾಮ ಸಮಿತಿಯ ಅಧ್ಯಕ್ಷ ಜಯಂತ ಗೌಡ ಅಡೀಲು, ಕಾರ್ಯದರ್ಶಿ ಪ್ರಶಾಂತ ಗೌಡ ಪೂವಾಜೆ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಹಿಳಾ ಸಮಿತಿಯ ಅಧ್ಯಕ್ಷ ಶೋಭಾ ನಾರಾಯಣಗೌಡ, ಗ್ರಾಮ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸಮಿತಿಯ ಸದಸ್ಯರುಗಳು ಹಾಗೂ ಸಂಘದ ಹಿತೈಷಿ ಕೆ.ವಿ.ಭಟ್ ಹಳ್ಳಿoಗೇರಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!