ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುರುಘಾ ಶ್ರೀಗಳಿಗೆ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಹೋಗುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿಗಳು ಸದ್ಯ ಜಾಮೀನ ಮೇಲೆ ಹೊರ ಇದ್ದಾರೆ.

ಪ್ರಕರಣದ ಹಿನ್ನೆಲೆ :
ಮುರುಘಾ ಮಠದ ಹಾಸ್ಟೆಲ್ ನ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಯನ್ನು ಕಳೆದ ಸೆಪ್ಟೆಂಬರ್ 2ರಂದು(2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗದಲ್ಲಿರುವ ಮುರುಘಾ ಮಠದಲ್ಲಿಯೇ ಇದ್ದಾಗ ರಾತ್ರಿ ವೇಳೆ ಮಠಕ್ಕೆ ದಾಳಿ ನಡೆಸಿದ್ದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಯನ್ನು ಅರೆಸ್ಟ್ ಮಾಡಿದ್ದರು. ಇವರ ವಿರುದ್ಧ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾದ ಏಳು ದಿನದ ಬಳಿಕ ಶ್ರೀಯನ್ನು ಪೊಲೀಸರು ಬಂಧಿಸಿದ್ದರು.

Leave a Reply

You May Have Missed

error: Content is protected !!