ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ; ಪ್ರಕರಣ ದಾಖಲು

ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ; ಪ್ರಕರಣ ದಾಖಲು

ಕಳೆಂಜ: ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆಂಜ ಗ್ರಾಮದ ನಿವಾಸಿ ಸೇಸಮ್ಮ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಎ.30ರಂದು ರಾತ್ರಿ ತನ್ನ ಮನೆಯಲ್ಲಿ ಪೂಜಾ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಅವರ ಸಂಬಂಧಿಕರೇ ಆದ ಯೋಗೀಶ್, ಆನಂದ ಬೀಜದಡಿ, ಶೇಖರ್, ಆನಂದ ಕುಲಾಡಿ, ಅಣ್ಣು ಗೌಡ, ಹರೀಶ್ ಹಾಗೂ ಇತರರು ಮನೆ ಬಳಿ ಬಂದು ಸೇಸಮ್ಮ ಅವರ ಮಗ ಹರೀಶ್ ನನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದಿದ್ದಾರೆ. ಇದಾದ ಬಳಿಕ ಯೋಗೀಶ್ ಎಂಬಾತ ಬಂದು ಹರೀಶ್ ಹಾಗೂ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಇದನ್ನು ನೋಡಿ ತಡೆಯಲು ಹೋದ ಸೇಸಮ್ಮ ಅವರನ್ನು ಆರೋಪಿಗಳು ಸೇರಿ ದೂಡಿ ಹಾಕಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದ್ದು ಅದರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!